Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:17 - ಪರಿಶುದ್ದ ಬೈಬಲ್‌

17 “ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:17
44 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.


ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು. ಇದು ಯೆಹೋವನ ನುಡಿ.


ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯತನವನ್ನು ಕುರಿತು ಮಾತಾಡುತ್ತಲೇ ಇರುವೆನು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


“ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


“ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.


ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು