ಯೆಶಾಯ 54:3 - ಪರಿಶುದ್ದ ಬೈಬಲ್3 ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.