Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:1 - ಪರಿಶುದ್ದ ಬೈಬಲ್‌

1 “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:1
39 ತಿಳಿವುಗಳ ಹೋಲಿಕೆ  

ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


“ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ; ಎಲ್ಲಾ ಜನರನ್ನು ಕರೆಯುತ್ತೇನೆ.


ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.


ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ನಾನು ನಿಮಗೆ ಮಾಡಿದ ಉಪದೇಶವು ಗಟ್ಟಿಯಾದ ಆಹಾರದಂತಿರದೆ ಹಾಲಿನಂತಿತ್ತು; ಏಕೆಂದರೆ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವಿನ್ನೂ ಸಿದ್ಧರಾಗಿರಲಿಲ್ಲ. ಈಗಲೂ ಸಹ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವು ಸಿದ್ಧರಾಗಿಲ್ಲ.


ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.


ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.


ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.


ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ.


ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.


ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


“ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.


ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.


ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ.


“ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು