Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:11 - ಪರಿಶುದ್ದ ಬೈಬಲ್‌

11 ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:11
29 ತಿಳಿವುಗಳ ಹೋಲಿಕೆ  

ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.


ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.


ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು.


ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು.


ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು