Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:12 - ಪರಿಶುದ್ದ ಬೈಬಲ್‌

12 “ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:12
36 ತಿಳಿವುಗಳ ಹೋಲಿಕೆ  

ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ!


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ.


ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ!


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು