Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:4 - ಪರಿಶುದ್ದ ಬೈಬಲ್‌

4 ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:4
30 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.


ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.


ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು