ಯೆಶಾಯ 56:1 - ಪರಿಶುದ್ದ ಬೈಬಲ್1 ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.