11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.
11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
11 ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.
11 ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.
ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.
ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.
ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.
ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.
ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;
ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.
ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.
“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’
ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.
ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.