ಯೆಶಾಯ 56:2 - ಪರಿಶುದ್ದ ಬೈಬಲ್2 ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.” ಅಧ್ಯಾಯವನ್ನು ನೋಡಿ |
ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”