ಯೆಶಾಯ 56:3 - ಪರಿಶುದ್ದ ಬೈಬಲ್3 ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”