ಯೆಶಾಯ 56:4 - ಪರಿಶುದ್ದ ಬೈಬಲ್4-5 ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಹೀಗನ್ನುತ್ತಾನೆ - ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದದ್ದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ನಪುಂಸಕರಿಗೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ, ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.