ಯೆಶಾಯ 56:6 - ಪರಿಶುದ್ದ ಬೈಬಲ್6 “ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.