Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:1 - ಪರಿಶುದ್ದ ಬೈಬಲ್‌

1 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:1
17 ತಿಳಿವುಗಳ ಹೋಲಿಕೆ  

‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.


ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.


ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.


ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.


ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು