ಯೆಶಾಯ 57:13 - ಪರಿಶುದ್ದ ಬೈಬಲ್13 ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.” ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.