ಯೆಶಾಯ 57:18 - ಪರಿಶುದ್ದ ಬೈಬಲ್18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.