Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:19 - ಪರಿಶುದ್ದ ಬೈಬಲ್‌

19 ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:19
27 ತಿಳಿವುಗಳ ಹೋಲಿಕೆ  

ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.


ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು