Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:2 - ಪರಿಶುದ್ದ ಬೈಬಲ್‌

2 ಆದರೆ ಶಾಂತಿಸಮಾಧಾನಗಳು ಬರುತ್ತವೆ. ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರವಿುಸಿಕೊಳ್ಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:2
19 ತಿಳಿವುಗಳ ಹೋಲಿಕೆ  

ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


“ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.


ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.


“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.


ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಧಿಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು