Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:21 - ಪರಿಶುದ್ದ ಬೈಬಲ್‌

21 ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:21
7 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”


ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.


ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.


“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು