Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:3 - ಪರಿಶುದ್ದ ಬೈಬಲ್‌

3 “ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:3
23 ತಿಳಿವುಗಳ ಹೋಲಿಕೆ  

ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.


ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು ‘ಅಶುದ್ಧ’ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು.


ಆಕೆಯ ಮಕ್ಕಳನ್ನು ನಾನು ಕನಿಕರಿಸೆನು. ಯಾಕೆಂದರೆ ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳು.


“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು