ಯೆಶಾಯ 57:5 - ಪರಿಶುದ್ದ ಬೈಬಲ್5 ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ? ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.