ಯೆಶಾಯ 57:6 - ಪರಿಶುದ್ದ ಬೈಬಲ್6 ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.