Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:7 - ಪರಿಶುದ್ದ ಬೈಬಲ್‌

7 ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮಹೋನ್ನತಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದೀ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:7
12 ತಿಳಿವುಗಳ ಹೋಲಿಕೆ  

ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.


ನೀನು ನಿನ್ನ ಬಟ್ಟೆಗಳಲ್ಲಿ ಕೆಲವನ್ನು ತೆಗೆದುಕೊಂಡು ನಿನ್ನ ಪೂಜಿಸುವ ಸ್ಥಳಗಳನ್ನು ವರ್ಣರಂಜಿತವನ್ನಾಗಿ ಮಾಡಿದೆ ಮತ್ತು ಆ ಸ್ಥಳಗಳಲ್ಲಿ ನೀನು ಸೂಳೆಯಂತೆ ವರ್ತಿಸಿದೆ. ಹಾದುಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ನಿನ್ನನ್ನು ಒಪ್ಪಿಸಿಕೊಟ್ಟೆ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನ್ನೆರೀ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


“ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.


ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು