Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:1 - ಪರಿಶುದ್ದ ಬೈಬಲ್‌

1 ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:1
37 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ನರಪುತ್ರನೇ, ನೀನು ಅವರ ನ್ಯಾಯತೀರಿಸುವಿಯಾ? ಅವರ ಪೂರ್ವಿಕರು ಮಾಡಿದ ಭಯಂಕರ ಸಂಗತಿಗಳನ್ನು ನೀನು ಅವರಿಗೆ ಹೇಳಬೇಕು.


“ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


“ನರಪುತ್ರನೇ, ಜೆರುಸಲೇಮ್ ಪಟ್ಟಣಕ್ಕೆ ಅದರ ಅಸಹ್ಯವಾದ ಆಚರಣೆಗಳ ಬಗ್ಗೆ ಹೇಳು. ದುಷ್ಟತ್ವದ ಕುರಿತು ಅವರಿಗೆ ತಿಳಿಸು.


ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.


ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ಆದ್ದರಿಂದ ನೀನು ನನ್ನ ಪರವಾಗಿ ಅವರೊಂದಿಗೆ ಮಾತನಾಡಬೇಕು. ನರಪುತ್ರನೇ, ನೀನು ಹೋಗಿ ಅವರಿಗೆ ದೈವವಾಣಿ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು