ಯೆಶಾಯ 58:12 - ಪರಿಶುದ್ದ ಬೈಬಲ್12 ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.