ಯೆಶಾಯ 58:13 - ಪರಿಶುದ್ದ ಬೈಬಲ್13 ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ, ಅಧ್ಯಾಯವನ್ನು ನೋಡಿ |