ಯೆಶಾಯ 58:14 - ಪರಿಶುದ್ದ ಬೈಬಲ್14 ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.