ಯೆಶಾಯ 58:4 - ಪರಿಶುದ್ದ ಬೈಬಲ್4 ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿ |
ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.