Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:5 - ಪರಿಶುದ್ದ ಬೈಬಲ್‌

5 ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:5
22 ತಿಳಿವುಗಳ ಹೋಲಿಕೆ  

“ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!


ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.”


ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.


ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.


ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.


ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.


ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು