Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:7 - ಪರಿಶುದ್ದ ಬೈಬಲ್‌

7 ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:7
38 ತಿಳಿವುಗಳ ಹೋಲಿಕೆ  

ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ.


ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.


ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆಹೋಗಿರಬಹುದು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.


ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.


“ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.


ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು