Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:8 - ಪರಿಶುದ್ದ ಬೈಬಲ್‌

8 ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:8
27 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.


ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ನಿನ್ನ ಜೀವಿತವು ಮಧ್ಯಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


“ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.


ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.


ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.


ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.


ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು