Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:9 - ಪರಿಶುದ್ದ ಬೈಬಲ್‌

9 ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:9
31 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಅವನು ಜನರನ್ನು ಮೋಸಗೊಳಿಸಲು ತನ್ನ ಕಾಲುಗಳಿಂದಲೂ ಕೈಬೆರಳುಗಳಿಂದಲೂ ಸನ್ನೆಮಾಡುತ್ತಾನೆ.


ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ಅವನ ತಂದೆ, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.


ಆದ್ದರಿಂದ ಈಗ ನನ್ನ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನ್ನು ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನ್ನ ಒಡೆಯನಾದ ಯೆಹೋವನು ಹೇಳಿದ್ದು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.


ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.


ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು