Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:1 - ಪರಿಶುದ್ದ ಬೈಬಲ್‌

1 ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:1
17 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳೆದುಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೆಯ ಸಂಗತಿಗಳನ್ನು ತಿಳಿಸುತ್ತಿದ್ದೆ.


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.


ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು