ಯೆಶಾಯ 59:11 - ಪರಿಶುದ್ದ ಬೈಬಲ್11 ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ. ಅಧ್ಯಾಯವನ್ನು ನೋಡಿ |