ಯೆಶಾಯ 59:14 - ಪರಿಶುದ್ದ ಬೈಬಲ್14 ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.