Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:15 - ಪರಿಶುದ್ದ ಬೈಬಲ್‌

15 ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:15
35 ತಿಳಿವುಗಳ ಹೋಲಿಕೆ  

ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”


ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.


ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,


ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.


ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.


ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.


ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.


ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


“ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.


ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”


ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”


ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು