ಯೆಶಾಯ 59:16 - ಪರಿಶುದ್ದ ಬೈಬಲ್16 ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.