ಯೆಶಾಯ 59:2 - ಪರಿಶುದ್ದ ಬೈಬಲ್2 ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.