Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:20 - ಪರಿಶುದ್ದ ಬೈಬಲ್‌

20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:20
18 ತಿಳಿವುಗಳ ಹೋಲಿಕೆ  

ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು