Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:21 - ಪರಿಶುದ್ದ ಬೈಬಲ್‌

21 ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:21
36 ತಿಳಿವುಗಳ ಹೋಲಿಕೆ  

“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಹೀಗಿರಲಾಗಿ ಪವಿತ್ರಾತ್ಮನ ಸಂಬಂಧವಾದ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೋ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಹೇಳಿದನು.


ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”


ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.


ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು