ಯೆಶಾಯ 59:7 - ಪರಿಶುದ್ದ ಬೈಬಲ್7 ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”