ಯೆಶಾಯ 6:11 - ಪರಿಶುದ್ದ ಬೈಬಲ್11 ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ, ಅಧ್ಯಾಯವನ್ನು ನೋಡಿ |
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.