ಯೆಶಾಯ 6:13 - ಪರಿಶುದ್ದ ಬೈಬಲ್13 ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.” ಅಧ್ಯಾಯವನ್ನು ನೋಡಿ |