Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:2 - ಪರಿಶುದ್ದ ಬೈಬಲ್‌

2 ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:2
34 ತಿಳಿವುಗಳ ಹೋಲಿಕೆ  

ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”


ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.


ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯ ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯ ಎತ್ತರ ಹದಿನೈದು ಅಡಿಗಳು.


ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.


ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವಗಳಲ್ಲಿ ಕೆಳಗಿಳಿಸುತ್ತಿದ್ದವು.


ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.


ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.


ದೇವರು ತನ್ನ ದೂತರುಗಳನ್ನು ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ.


ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.


ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದವು.


ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.


ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ದೇವರು ತನ್ನ ಪರಲೋಕದ ಸೇವಕರುಗಳಲ್ಲಿಯೂ ಭರವಸವಿಡುವುದಿಲ್ಲ. ದೇವರು ತನ್ನ ದೂತರುಗಳಲ್ಲಿಯೂ ತಪ್ಪನ್ನು ಕಂಡುಹಿಡಿಯುವನು.


ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,


ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.


ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.


ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.


ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು