ಯೆಶಾಯ 6:3 - ಪರಿಶುದ್ದ ಬೈಬಲ್3 ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿ |