ಯೆಶಾಯ 6:4 - ಪರಿಶುದ್ದ ಬೈಬಲ್4 ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು. ಅಧ್ಯಾಯವನ್ನು ನೋಡಿ |
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.