ಯೆಶಾಯ 6:7 - ಪರಿಶುದ್ದ ಬೈಬಲ್7 ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |