Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:1 - ಪರಿಶುದ್ದ ಬೈಬಲ್‌

1 “ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:1
32 ತಿಳಿವುಗಳ ಹೋಲಿಕೆ  

ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.


ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.


ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.


ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.


ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.


ಯೆಹೋವನ ಮಹಿಮೆಯು ಪೂರ್ವದಿಕ್ಕಿನ ದ್ವಾರದ ಮೂಲಕ ಆಲಯದೊಳಗೆ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು