Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:13 - ಪರಿಶುದ್ದ ಬೈಬಲ್‌

13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:13
13 ತಿಳಿವುಗಳ ಹೋಲಿಕೆ  

ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.


ಬನ್ನಿರಿ, ಆತನ ಪವಿತ್ರ ಮಂದಿರಕ್ಕೆ ಹೋಗೋಣ; ಆತನ ಪಾದಪೀಠದ ಮುಂದೆ ಆರಾಧಿಸೋಣ.


ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ.


ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.


ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದೆನು.


“ನೀನು ನನ್ನ ಸೇವಕರಿಗೆ ಆಹಾರವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೊಡುವ ಭರವಸೆ ನೀಡಿರುವೆ. ಆದ್ದರಿಂದ ದಯವಿಟ್ಟು ಇವುಗಳನ್ನು ಒದಗಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು