ಯೆಶಾಯ 60:14 - ಪರಿಶುದ್ದ ಬೈಬಲ್14 ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.