Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:15 - ಪರಿಶುದ್ದ ಬೈಬಲ್‌

15 “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:15
20 ತಿಳಿವುಗಳ ಹೋಲಿಕೆ  

ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.


ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು